Home » ಅಪಘಾತದಲ್ಲಿ ಗಾಯಗೊಂಡ ಶಿಕ್ಷಕ ನಿಧನ
 

ಅಪಘಾತದಲ್ಲಿ ಗಾಯಗೊಂಡ ಶಿಕ್ಷಕ ನಿಧನ

by Kundapur Xpress
Spread the love

ಕುಂದಾಪುರ : ಬೈಕ್ ಹಾಗೂ ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೋಟ ಮಣೂರು ಪಡುಕರೆ ನಿವಾಸಿ, ಶಿಕ್ಷಕ ಸಂತೋಷ (44 ವರ್ಷ) ಚಿಕಿತ್ಸೆ ಫಲಿಸದೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ

ಆ.8ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ ಬೈಕ್‌ಗೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಂತೋಷ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೋಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

Related Articles

error: Content is protected !!