173
ಬೆಳಗಾವಿ: ಚಲಿಸುತ್ತಿದ್ದ ತಮಿಳುನಾಡು ಮೂಲದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಪತಿ ಎದುರೇ ಪತ್ನಿ ಸ್ಥಳದಲ್ಲೇ ಅಸುನೀಗಿದ ಘಟನೆ ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ವೈದ್ಯೆ ಆಶಾ ಕೋಳಿ (32) ಮೃತರು. ಆಶಾ ಪತಿ ಡಾ| ಭೀಮಪ್ಪ ಕೋಳಿ ಮತ್ತು ಚಾಲಕ ಮಹೇಶ ಖೋತ ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯ ದಂಪತಿ ಧಾರವಾಡದಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಬರುತ್ತಿದ್ದಾಗ ಹಿರೇಬಾಗೇವಾಡಿ ಬಳಿ ಅಪಘಾತ ನಡೆದಿದೆ. ಲಾರಿ ಹಿಂಬದಿಗೆ ರಭಸವಾಗಿ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)