74
ಕಾರ್ಕಳ : ಸ್ಕೂಟಿ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಕ್ರೆಯಲ್ಲಿ ನಡೆದಿದೆ. ನಕ್ರೆ ನಿವಾಸಿ ನಿತೇಶ್ (21) ಮೃತ ದುರ್ದೈವಿ. ಮಹಾಲಿಂಗೇಶ್ವರ ದೇವಸ್ಥಾನದಿಂದ ವಾಪಸ್ಸಾಗುತ್ತಿದ್ದ ವೇಳೆ ದೇವರಗುಡ್ಡೆ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಸವಾರನನ್ನು ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)