324
ಉಡುಪಿ : ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ನ ಬಳಿ ಸ್ಕೂಟರ್ ಒಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು
ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸ್ಥಳೀಯ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ಘೋರ ದುರಂತವೊಂದು ತಪ್ಪಿದಂತಾಗಿದೆ. ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಹಾಗೂ ಮತ್ತಿತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು

