ಬಂಟ್ವಾಳ : ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2014 ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಮಂಗಳೂರಿನ ಮಂಜನಾಡಿ ಗ್ರಾಮದ ನಾಟೇಕಲ್ ನಿವಾಸಿ ಅಶ್ರಫ್ ಎಂಬಾತನು ಬಂಧಿತ ಆರೋಪಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ವಿಜಯಕುಮಾರ್ ಹಾಗೂ ಗಣೇಶ್ ಪ್ರಸಾದ್ ರವರು ದೇರಳಕಟ್ಟೆಯ ಕುತ್ಯಾರು ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ವಿಧಿಸಿದೆ