Home » ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ : ಆರೋಪಿ ಧರ್ಮಗುರು ಬಂಧನ
 

ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ : ಆರೋಪಿ ಧರ್ಮಗುರು ಬಂಧನ

by Kundapur Xpress
Spread the love

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, 1 ಲಕ್ಷ ರು. ಪಡೆದು ವಂಚಿಸಿದ ಆರೋಪದ ಮೇರೆಗೆ ಮುಸ್ಲಿಂ ಧರ್ಮಗುರುವನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ.

2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಪತಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಆಗ ಆರೋಪಿಯು ‘ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ’ ಎಂದು ನಂಬಿಸಿದ್ದಾನೆ. ಬಳಿಕ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದಾನೆ. ಮಹಿಳೆ ತನ್ನ ಅಕ್ಕನ ಜತೆ ಆರೋಪಿ ಬಳಿ ಹಲವು ಬಾರಿ ಹೋಗಿದ್ದಾರೆ.

2022ರ ಫೆ.10ರಂದು ಸಂತ್ರಸ್ತೆಯ ಅಕ್ಕನಿಗೆ ಬೇರೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬರೇ ಹೆಜಮಾಡಿ ಮನೆಗೆ ಹೋಗಿದ್ದರು. ಈ ವೇಳೆ ಆರೋಪಿಯು ಆಕೆಗೆ ಚಿಕಿತ್ಸೆಯ ನೆಪದಲ್ಲಿ ಕಿರುಕುಳ ನೀಡಿದ್ದಾನೆ. ಮಾತ್ರವಲ್ಲದೆ, ಆಕೆಯಿಂದ 55 ಸಾವಿರ ರು. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ನಂತರವೂ ಚಿಕಿತ್ಸೆಗೆ ಜಾಸ್ತಿ ಹಣ ಖರ್ಚಾಗುತ್ತದೆ ಎಂದು ನಂಬಿಸಿ ಒಟ್ಟು ಸುಮಾರು ಒಂದು ಲಕ್ಷ ರು. ಪಡೆದು ವಂಚಿಸಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ.

 

Related Articles

error: Content is protected !!