Home » ಪ್ರಜ್ವಲ್‌ಗೆ ಬಿಡುಗಡೆ ಭಾಗ್ಯ ಇಲ್ಲ
 

ಪ್ರಜ್ವಲ್‌ಗೆ ಬಿಡುಗಡೆ ಭಾಗ್ಯ ಇಲ್ಲ

ಪ್ರಜ್ವಲ್‌ ಜಾಮೀನು ಅರ್ಜಿ ವಜಾ

by Kundapur Xpress
Spread the love

ಬೆಂಗಳೂರು : ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆಯಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಜಾಮೀನು ಕೋರಿ 2ನೇ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿ ಧಿಗಳ ವಿಶೇಷ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಇದಕ್ಕೂ ಮುನ್ನ ಆರೋಪಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶುಕ್ರವಾರ ಪ್ರಕಟಿಸಿದರು. ಹೀಗಾಗಿ ಕಳೆದ 14 ತಿಂಗಳಿಂದ ಜೈಲಲ್ಲಿರುವ ಪ್ರಜ್ವಲ್‌ಗೆ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ

 

Related Articles

error: Content is protected !!