ಮಂಗಳೂರು : ಸುರತ್ಕಲ್ ಸಮೀಪದ ಮುಕ್ಕ ಎಂಬಲ್ಲಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಶುಕ್ರವಾರದಂದು ಬಂಧಿಸಲಾಗಿದೆ ಬಂಧಿತ ಆರೋಪಿ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಬಾಂಗ್ಲಾದೇಶಿ ಅನರುಲ್ ಶೇಖ್ ಮೂರು ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡಿದ್ದ ಇವನನ್ನು ಖಚಿತ ಮಹಿತಿ ಮೇರೆಗೆ ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.