172
ಉಡುಪಿ : ಇಲ್ಲಿನ ಮಲ್ಪೆ ಠಾಣೆಯಲ್ಲಿ ದಾಖಲಾಗಿದ್ದ ಆಕ್ರಮ ಬಾಂಗ್ಲಾದೇಶ ವಲಸಿಗರ ಪ್ರಕರಣದಲ್ಲಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ತಿರಸ್ಕರಿಸಿ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಮ್.ಪುರುಷೋತ್ತಮ್ ಆದೇಶಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಪರ ವಕೀಲ ಹಾಗೂ ಸರ್ಕಾರಿ ವಕೀಲರ ವಾದವನ್ನು ಆಲಿಸಿದ ನ್ಯಾಯಪೀಠವು, ಈ ಪ್ರಕರಣದಲ್ಲಿ ಆರೋಪಿಗಳ್ಯಾರೂ ಮುಗ್ಧರಲ್ಲ ದಾಖಲೆ ಗಳಿಲ್ಲದೇ ಅಕ್ರಮವಾಗಿ ದೇಶದ ಗಡಿಯನ್ನು ದಾಟಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಬಗ್ಗೆ ಇನಷ್ಟು ತನಿಖೆ ನಡೆಯಬೇಕಿದೆ. ಸ್ಥಳೀಯ ವಿಳಾಸದಲ್ಲಿ ಇವರಿಗೆ ದಾಖಲೆಗಳನ್ನು ಪಡೆಯಲು ಸಹಕರಿಸಿದವರು ಯಾರು ? ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ದೊರೆತರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

