Home » ಬ್ಯಾಂಕ್‌ ದರೋಡೆ ಪ್ರಕರಣವನ್ನು ಭೇದಿಸಿದ ಮಂಗಳೂರು ಪೊಲೀಸರು
 

ಬ್ಯಾಂಕ್‌ ದರೋಡೆ ಪ್ರಕರಣವನ್ನು ಭೇದಿಸಿದ ಮಂಗಳೂರು ಪೊಲೀಸರು

by Kundapur Xpress
Spread the love

 ಮಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಅತೀ ದೊಡ್ಡ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಮೂಲದ ಮೂವರು ದರೋಡೆಕೋರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ಸು ಕಂಡಿದೆ. ಈ ಪ್ರಕರಣದಲ್ಲಿ ಪರಾರಿಯಾಗಿದ್ದ ದರೋಡೆಕೋರರ ಪೈಕಿ ಓರ್ವನನ್ನು ಮುಂಬೈನಲ್ಲಿ ಹಾಗೂ ಇಬ್ಬರನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸುವಲ್ಲಿ ಪೊಲೀಸ್ ತಂಡ ಸಫಲವಾಗಿದೆ.

ಮುಂಬೈ ಮೂಲದ ಮುರುಗಂಡಿ ತೇವರ್(36) ಈ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಆಗಿದ್ದಾನೆ. ಡೊಂಬಿವಿಲಿ ಪಶ್ಚಿಮದ ಯೋಸುವ ಯಾನೆ ರಾಜೇಂದ್ರನ್ (35) ಹಾಗೂ ಮುಂಬೈ ತಿಲಕ್ ನಗರದ ಕಣ್ಣನ್ ಮಣಿ(36) ತಮಿಳುನಾಡಿನಲ್ಲಿ ಬಂಧಿತರಾಗಿದ್ದಾರೆ. ಇವರು ಮುಂಬಯಿ ಧಾರಾವಿಯ ಡೆಡ್ಲಿ ಗ್ಯಾಂಗ್ ತಂಡದ ಸದಸ್ಯರು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಂದ ಫಿಯೆಟ್ ಕಾರು, ಎರಡು ಗೋಣಿಚೀಲ ನಗದು, ಚಿನ್ನ 2 ಪಿಸ್ತೂಲ್, ತಲ್ವಾರ್ ಹಾಗೂ ಇತರ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ. ಗುಪ್ತಚರ ಇಲಾಖೆಯ ನೆರವಿನಲ್ಲಿ ಈ ಪ್ರಕರಣವನ್ನು ಬೇಧಿಸಲು ಸಾಧ್ಯವಾಗಿದೆ. ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ

 

Related Articles

error: Content is protected !!