ಮಂಗಳೂರು : ಉಳ್ಳಾಲ ಸಮೀಪದ ಕೆ.ಸಿ.ರೋಡ್ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿಗಳ ಪೈಕಿ ಇಬ್ಬರನ್ನು ಬುಧವಾರ ತಮಿಳುನಾಡಿನ ತಿರುನೆಲ್ವೆಲಿ ಜಿಲ್ಲೆಯ ಅಂಬಸಮುತ್ರಮ್ ಕೋರ್ಟ್ಗೆ ಹಾಜರುಪಡಿಸಲಾಗಿದೆ.
ಆರೋಪಿಗಳಾದ ಮುರುಗಂಡಿ ಥೇವರ್, ಯೊಸುವಾ ರಾಜೇಂದ್ರನ್ ಅವರನ್ನು ನ್ಯಾಯಮೂರ್ತಿ ಅಚ್ಯುತನ್ ಅವರ ಎದುರು ಹಾಜರುಪಡಿಸಲಾಗಿದೆ. ಅಲ್ಲದೆ ಆರೋಪಿಗಳನ್ನು ಹಾಜರುಪಡಿಸಿ ಫಿಯೇಟ್ ಕಾರು, ಎರಡು ಪಿಸ್ತೂಲು, 4 ಲೈವ್ ಬುಲೆಟ್ಸ್, ಮೂರು ಲಕ್ಷ ಹಣ, 2 ಕೆ.ಜಿ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಕೋರ್ಟ್ಗೆ ಪೊಲೀಸರು ಮಾಹಿತಿ ನೀಡಿದರು. ಕೋರ್ಟ್ಗೆ ಹಾಜರುಪಡಿಸಿದ ಬಳಿಕ ಆರೋಪಿಗಳ ಹೆಚ್ಚಿನ ತನಿಖೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದು ಮಂಗಳೂರಿಗೆ ಕರೆ ತರಲಾಗುತ್ತಿದೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಜ.20ರಂದು ಮಹತ್ವದ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರ ತಂಡ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿತ್ತು