ಕುಂದಾಪುರ : ರಸ್ತೆಯಲ್ಲಿನ ಹೊಂಡ ತಪ್ಪಿಸುವ ಸಲುವಾಗಿ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಜಲಜ ಎಂಬವರು ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉದಯ ಎಂಬವರು ಜಲಜಾರವರನ್ನು ಬೈಕಿನಲ್ಲಿ ಕುಳ್ಳುರಿಸಿಕೊಂಡು ಆಲೂರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದವೇಳೆ ಆಲೂರು ಗ್ರಾಮದ ಕಳಿ ಚಿತ್ರಕೂಟದ ಬಳಿ ರಸ್ತೆಯಲ್ಲಿನ ಹೊಂಡ ತಪ್ಪಿಸುವ ಸಲುವಾಗಿ ಒಮ್ಮೆಲೆ ಬ್ರೇಕ್ ಹಾಕಿದ್ದಾರೆ ಪರಿಣಾಮ ಜಲಜ ಬೈಕಿನಿಂದ ಜಾರಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ