89
ಉಡುಪಿ : ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್‌ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು.
ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಇಡೀ ಶಾಲೆಯನ್ನು ಸುಪರ್ದಿಗೆ ಪಡೆದು ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದರು. ಯಾವುದೇ ರೀತಿಯ ಸ್ಪೋಟಕ ವಸ್ತುಗಳು ಕಂಡುಬಂದಿಲ್ಲ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

