Home » ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು
 

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

by Kundapur Xpress
Spread the love

ಉಡುಪಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿಗೆ ಆಗೆದಿರುವ ಹೊಂಡಕ್ಕೆ ಕಾರೊಂದು ಬಿದ್ದ ಘಟನೆ  ನಡೆದಿದೆ.

ಅಂಬಲಪಾಡಿಯಲ್ಲಿ ಅಂಡರ್ ಪಾಸ್ ನಿರ್ಮಿಸಲು ಪಿಲ್ಲರ್‌ಗಾಗಿ ಬೃಹತ್ ಹೊಂಡಗಳನ್ನು ತೆಗೆಯಲಾಗಿದ್ದು, ಇಲ್ಲಿ ಬ್ಯಾರಿಕೇಡ್‌ ಗಳನ್ನು ಅಳವಡಿಸಿ ಸಂಚಾರವನ್ನು ನಿಷೇಧಿಸಲಾಗಿತ್ತು ಆದರೆ ರಾತ್ರಿ ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಕಾರು ಚಾಲಕನ ನಿಯಂತ್ರಣ ತಪ್ಪಿಈ ಹೊಂಡಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

Related Articles

error: Content is protected !!