120
ಬೈಂದೂರು : ಬೈಂದೂರು ಸಮೀಪದ ರಾಷ್ಟ್ರೀಯ ಹೆದ್ದಾರಿ ಓವರ್ ಬ್ರಿಜ್ ಮೇಲೆ ಬ್ರಿಜ್ಜಾ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ
ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಚಲಿಸುತ್ತಿದ್ದ ಬ್ರಜ್ಜಾ ಕಾರು ರಾಷ್ಟ್ರೀಯ ಹೆದ್ದಾರಿ ಓವರ್ ಬ್ರಿಜ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು ಅದರಲ್ಲಿರುವ ಚಾಲಕ ಹಾಗೂ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ
ಪೊಲೀಸರು ಆಗಮಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬ್ರಿಜ್ಜಾ ಕಾರನ್ನು ಹೆದ್ದಾರಿಯ ಪಕ್ಕಕ್ಕೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

