Home » ಬಿಕರ್ನಕಟ್ಟೆಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ
 

ಬಿಕರ್ನಕಟ್ಟೆಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ

by Kundapur Xpress
Spread the love

ಮಂಗಳೂರು : ಬಿಕರ್ನಕಟ್ಟೆಯ ಕೈಕಂಬ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದು ಭಾನುವಾರ ಬೆಂಕಿಗೆ ಆಹುತಿಯಾಗಿದೆ.

ಕಾರಿನ ಬಾನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡು, ಏಕಾಏಕಿ ಹೊತ್ತಿ ಉರಿದಿದೆ. ಜೋರಾಗಿ ಸುರಿಯುತ್ತಿದ್ದ ಮಳೆಯ ನಡುವೆ ಕ್ಷಣಾರ್ಧದಲ್ಲಿ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಕರಕಲಾಗಿದೆ. ಈ ವೇಳೆ ಎಲ್ಲ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ರಸ್ತೆಯಲ್ಲಿ ಹರಿಯುತ್ತಿದ್ದ ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಿಲ್ಲ.

 

Related Articles

error: Content is protected !!