108
ಬೆಂಗಳೂರು : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾ ದೇಶಗಳ ಕೆಲ ಶೆಲ್ ಕಂಪನಿಗಳು ಮತ್ತು ಕ್ಯಾಸಿನೊಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದೆ.
ಸೈಬರ್ ವಂಚನೆಯ ಹಣವನ್ನು ಬಳಸಿಕೊಂಡು ಕ್ರೆಡಿಟ್ ಕಾರ್ಡ್ ಪಾವತಿ ತೋರಿಸುವ ಮುಖಾಂತರ ವೀರೇಂದ್ರಗೆ ಸೇರಿದ ಕ್ಯಾಸಿನೋಗಳ ನಗದು ಹಣವನ್ನು ಕಾನೂನು ಬದ್ದ ಆದಾಯವಾಗಿ ಪರಿವರ್ತಿಸಿರುವ ಶಂಕೆಯೂ ವ್ಯಕ್ತವಾಗಿದೆ. ಇ.ಡಿ.ಶೋಧನೆ ವೇಳೆ ವೀರೇಂದ್ರ ಸಾಗರೋತ್ತರ ವ್ಯವಹಾರ ನಡೆಸುತ್ತಿರುವ ಸಂಬಂಧ ಕೆಲ ದಾಖಲೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

