95
ಮಂಗಳೂರು : ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ಕಾರ್ಯಚರಣೆಗೆ ಸಂಬಂಧಿಸಿದಂತೆ ಇನ್‌ಸ್ಟಾ ಗ್ರಾಂ ಖಾತೆಯಲ್ಲಿ ರೇಷ್ಮಾ ಎಂಬವರು ಮಾಡಿದ ವಿವಾದಾತ್ಮಕ ಪೋಸ್ಟ್ ಕುರಿತಂತೆ ಕೊಣಾಜೆ ಪೊಲೀಸರು ಕೇಸು ದಾಖಲಿಸಿ ಸೆನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಈ ಪ್ರಕರಣದಲ್ಲಿ ತನಿಖೆ ಕೈಗೊಂಡು ಪ್ರಚೋದನಕಾರಿಯಾದ ಸಂದೇಶವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ರೇಷ್ಮಾ ಬೆಳಾಲ್ ಎಂಬವರನ್ನು ಪತ್ತೆ ಮಾಡಿದ್ದು, ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

