96
ಕುಂದಾಪುರ : ಇಲ್ಲಿನ ಶಿರಿಯಾರ ಗ್ರಾಮದ ಸ್ಯಾಬರಕಟ್ಟೆಯ ರಿಕ್ಷಾ ನಿಲ್ದಾಣದ ಸಮೀಪ ಐಪಿಎಲ್ ಫೈನಲ್ ಪಂದ್ಯಾಟಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಕೋಟ ಠಾಣಾ ಪಿಎಸ್‌ಐ ರಾಘವೇಂದ್ರ ಬಂಧಿಸಿದ್ದಾರೆ.
ಬಂಧಿತರನ್ನು ಶಿವರಾಜ್ ಹಾಗೂ ಪ್ರಶಾಂತ್ ಎಂದು ಗುರುತಿಸಲಾಗಿದೆ. ಸಾವರ್ಜನಿಕರಿಂದ ಹಣ ಸಂಗ್ರಹ ಮಾಡುತ್ತಾ, ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿ ಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸ್ಟ್ರಾಬರಕಟ್ಟೆ ರಿಕ್ಷಾ ನಿಲ್ದಾಣದ ಸಮೀಪ ದಾಳಿ ನಡೆಸಿದಾಗ, ಬೆಟ್ಟಿಂಗ್ ವೆಬ್‌ಸೈಟ್ ಮೂಲಕ 3 ನೇ ಆರೋಪಿ ಚಂದ್ರ ಜನ್ನಾಡಿ ಎಂಬಾತನ ಜೊತೆ ಸಂಘಟಿತವಾಗಿ ಬಂಧಿತರಿಬ್ಬರು ಬೆಟ್ಟಿಂಗ್ ಮಾಡುತ್ತಿರುವುದು ಕಂಡು ಬಂತು. ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಿದ 3 ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದ್ದು, ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

