ಕುಂದಾಪುರ: ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿರುವ ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ನಿವಾಸಿ ಅನಿಲ್ಕುಮಾರ್(30) ಶುಕ್ರವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸ್ನಾನ ಮಾಡಿ ಟೀ ಕುಡಿದ ಸ್ವಲ್ಪ ವೇಳೆಯಲ್ಲಿ ಕುಸಿದ ಅವರನ್ನು ಬ್ರಹ್ಮಾವರ ಖಾಸಗಿ ಆಸತ್ರೆಗೆ ಕರೆದೊಯ್ಯಲಾಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅನಿಲ್ಕುಮಾರ್ ಮೃತ ಪಟ್ಟಿರುವುದಾಗಿ ತಿಳೀಸಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದು ಆತ್ಮಹತ್ಯೆ
ಕೋಟ ವ್ಯಾಪ್ತಿಯ ಗಿಳಿಯಾರು ನಿವಾಸಿ ಗೌರಿ (55ವರ್ಷ) ಶುಕ್ರವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಕೃತ್ಯ ಎಸಗಿದ್ದಾರೆ ಎಂದು ಪುತ್ರ ಜಗದೀಶ್ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ