ಭಟ್ಕಳ: ಮುರ್ಡೇಶ್ವರದಲ್ಲಿ ಈಜಲು ಇಳಿದಿದ್ದ ಏಳು ಮಂದಿ ಪ್ರವಾಸಿ ವಿದ್ಯಾರ್ಥಿನಿಯರ ಪೈಕಿ ನಾಲ್ವರು ನೀರು ಪಾಲಾದರೆ, ಮೂವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಶೈವಂತಿ ಗೋಪಾಲಪ್ಪ (15ವರ್ಷ) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಉಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದ 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಬೋಟ್ ಮೂಲಕ ಮೂವರ ಮೃತದೇಹವನ್ನು ಹೊರತೆಗೆದಿದ್ದಾರೆ
ವಿದ್ಯಾರ್ಥಿನಿಯರು ಶೈಕ್ಷಣಿಕ ಪ್ರವಾಸಕ್ಕಾಗಿ ಮುರ್ಡೇಶ್ವರಕ್ಕೆ ಬಂದಿದ್ದು ಸಂಜೆ ದೇವರ ದರ್ಶನ ಮುಗಿಸಿ ಸಮುದ್ರಲ್ಲಿ ಆಟವಾಡುತ್ತಿರುವಾಗ 7 ವಿದ್ಯಾರ್ಥಿನಿಯರು ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ಆಳ ಸಮುದ್ರದಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳು ಮೂವರನ್ನು ರಕ್ಷಣೆ ಮಾಡಿ ದಡಕ್ಕೆ ತಂದಿದ್ದಾರೆ ಉಳಿದ ನಾಲ್ವರು ವಿದ್ಯಾರ್ಥಿನಿಯರು ದುರಂತ ಅಂತ್ಯ ಕಂಡಿದ್ದಾರೆ ಪಿ.ಎಸ್.ಐ ಹಣಮಂತ ಬಿರಾದಾರ ಅವರ ನೇತೃತ್ವ ದಲ್ಲಿ ಕರಾವಳಿ ಪೊಲೀಸ್ ಪಡೆ ಸಿಬ್ಬಂದಿಗಳು ಕಣ್ಮರೆಯಾದವರಿಗಾಗಿ ಕಾರ್ಯಾಚರಣೆ ನಡೆಸಿದ್ದರು