ಕುಂದಾಪುರ : ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ದೋಣಿಯಲ್ಲಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಮೀನುಗಾರ ಉಪ್ಪುಂದ ಗ್ರಾಮದ ಗಣೇಶ್ (53) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅ.15ರಂದು ಉಪ್ಪುಂದ ಅರಬ್ಬಿ ಸಮುದ್ರದಲ್ಲಿ ಮೀನು ಹಿಡಿಯಲು ದೋಣಿಯಲ್ಲಿ ಸಮುದ್ರಕ್ಕೆ ತೆರಳಿದ್ದ ಕುಸಿದು ಬಿದ್ದು ಅಸ್ವಸ್ಥರಾದವರನ್ನು ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಃ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ