Home » ಮರದಿಂದ ಬಿದ್ದ ವ್ಯಕ್ತಿ ಸಾವು
 

ಮರದಿಂದ ಬಿದ್ದ ವ್ಯಕ್ತಿ ಸಾವು

by Kundapur Xpress
Spread the love

ಕುಂದಾಪುರ: ತೆಂಗಿನಕಾಯಿ ಕೊಯ್ಯಲು ಮರ ಏರಿದ್ದ ವ್ಯಕ್ತಿ ಆಯತಪ್ಪಿ ಕೆಳಕ್ಕೆ . ಬಿದ್ದು ಗಾಯಗೊಂಡಿದ್ದ ಚಿತ್ತೂರಿನ | ರಾಜೇಶ್ (47) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರು ಮೇ 13ರಂದು ಚಿತ್ತೂರು ಗ್ರಾಮದ ಮಾರಣಕಟ್ಟೆಯ ಮಹಾಬಲೇಶ್ವರ ಎಂಬವರ ಮನೆಯ ತೋಟದಲ್ಲಿ ತೆಂಗಿನಕಾಯಿ ಕೊಯ್ಯಲು ಹೋಗಿದ್ದು, ಆಕಸ್ಮಿಕವಾಗಿ ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!