Home » ಅವಹೇಳನಕಾರಿ ಪೋಸ್ಟ್ : ಜಾವೀದ್ ಪಾಷ ಬಂಧನ
 

ಅವಹೇಳನಕಾರಿ ಪೋಸ್ಟ್ : ಜಾವೀದ್ ಪಾಷ ಬಂಧನ

by Kundapur Xpress
Spread the love

ಮಳವಳ್ಳಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಯುವಕನನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸರು ಬಂಧಿಸಿದ್ದಾರೆ. ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಬಂಧಿತ ಯುವಕ, ಮೇ 8ರಂದು ಎಐ ತಂತ್ರಜ್ಞಾನ ಬಳಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.

ಎಐ ತಂತ್ರಜ್ಞಾನ ಬಳಸಿ ಮೋದಿಯವರು ಇಮ್ರಾನ್ ಖಾನ್‌ನ ಕಾಲಿನ ಶೂ ಬಿಚ್ಚುವ ರೀತಿ ಫೋಟೋ ಕ್ರಿಯೇಟ್ ಮಾಡಿ, ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದ. ಇದನ್ನು ಗಮನಿಸಿದ ಬಿಜೆಪಿ ಕಾರ್ಯ ಕರ್ತರು ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಆತನ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಿರುಗಾವಲು ಪೊಲೀಸ್ ಠಾಣೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

 

Related Articles

error: Content is protected !!