ನವದೆಹಲಿ : ಭ್ರಷ್ಟಾಚಾರದ ವಿರುದ್ಧ ಸಮರ ಸಾರುವ ಮೂಲಕವೇ ಅಧಿಕಾರಕ್ಕೇರಿದ ಆಮ್ ಆದ್ದಿ ಪಕ್ಷದ ಸಂಸ್ಥಾಪಕ ಹಾಗೂ ದೆಹಲಿ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ದೆಹಲಿ ಅಬಕಾರಿ ಹಗರಣದ ಮುಖ್ಯ ಸಂಚುಗಾರ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದೆ.
ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಇ.ಡಿ. ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ 2ಕ್ಕೆ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಜಡ್ಜ್ ಕಾವೇರಿ ಬವೇಜಾ ಅವರ ಮುಂದೆ ಹಾಜರು ಪಡಿಸಿದರು. ಈ ವೇಳೆ ಅವರನ್ನು 10 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂಬ ಕೋರಿಕೆ ಇಟ್ಟರು. ಜತೆಗೆ ಹಗರಣದಲ್ಲಿ ಕೇಜ್ರಿವಾಲ್ ಪಾತ್ರವನ್ನು ನ್ಯಾಯಾಲಯಕ್ಕೆ ವಿವರಿಸಿದರು ನ್ಯಾಯಾಲಯ ಕೇಜ್ರಿವಾಲ್ ರವರನ್ನು 7 ದಿನಗಳ ಕಾಲ ಇ ಡಿ ವಶಕ್ಕೆ ನೀಡಿದೆ ಕೇಜ್ರಿವಾಲ್