Home » ಡಿ.ಕೆ.ಶಿ. ಬೆಂಗಾವಲು ವಾಹನ ಪಲ್ಟಿ : ನಾಲ್ವರಿಗೆ ಗಾಯ
 

ಡಿ.ಕೆ.ಶಿ. ಬೆಂಗಾವಲು ವಾಹನ ಪಲ್ಟಿ : ನಾಲ್ವರಿಗೆ ಗಾಯ

by Kundapur Xpress
Spread the love

ಶ್ರೀರಂಗಪಟ್ಟಣ : ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಶನಿವಾರ ಸಂಜೆ ಅಪಘಾತಕ್ಕೀಡಾಗಿ 4 ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾಗ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಮಳೆ ಬರುತ್ತಿದ್ದ ಕಾರಣ

ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಎಎಸ್‌ಐ ಮಹೇಶ್, ಸಿಬ್ಬಂದಿ ದಿನೇಶ್, ಜಯಲಿಂಗ ಹಾಗೂ ಕಾರ್ತಿಕ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

 

Related Articles

error: Content is protected !!