201
ಉಡುಪಿ : ;ಮದ್ಯ ಸೇವನೆ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಠಾಣೆಯ ಉಪನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಬಸ್ಸು ಚಲಾಯಿಸಿದ್ದು, ಆತನನ್ನು ತಪಾಸಣೆ ಮಾಡಿದಾಗ ಮದ್ಯ ಸೇವಿಸಿರುವುದು ದೃಢಪಟ್ಟಿತ್ತು ಈ ಹಿನ್ನಲೆಯಲ್ಲಿ ಆತನ ವಿರುದ್ದ ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

