Home » ಮಾದಕ ವಸ್ತುಪೂರೈಸುತ್ತಿದ್ದ ಆರೋಪಿಯ ಬಂಧನ
 

ಮಾದಕ ವಸ್ತುಪೂರೈಸುತ್ತಿದ್ದ ಆರೋಪಿಯ ಬಂಧನ

by Kundapur Xpress
Spread the love

ಮಂಗಳೂರು : ಮಂಗಳೂರು ಠಾಣಾ ವ್ಯಾಪ್ತಿಯಲ್ಲಿ ಐದು ಜನ ಆರೋಪಿತರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಭಾನುವಾರ ಮೈಸೂರಿನಲ್ಲಿ ಬಂಧನವಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಿವಾಸಿ ದಿವಾಕರ ಶೆಟ್ಟಿ ಅವರ ಪುತ್ರ ಧ್ರುವ ಡಿ. ಶೆಟ್ಟಿ (22) ಅವರನ್ನು ವಶಕ್ಕೆ ಪಡೆಯಲಾಗಿದೆ.

ನಂತರ ಅವರನ್ನು ನ್ಯಾಯಾಂಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಗಾಗಿಸಿದೆ. ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು

 

Related Articles

error: Content is protected !!