Home » ಡ್ರಗ್ಸ್ ಮಾರಾಟ : ಓರ್ವನ ಸೆರೆ
 

ಡ್ರಗ್ಸ್ ಮಾರಾಟ : ಓರ್ವನ ಸೆರೆ

ಸಿಸಿಬಿ ಕಾರ್ಯಾಚರಣೆ

by Kundapur Xpress
Spread the love

ಮಂಗಳೂರು :  “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ

ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಯುವಕನೊಬ್ಬ ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಮಂಗಳೂರು ಬಿಜೈ ಟಾಟಾ ಶೋರೂಂ ಹಿಂಭಾಗ ಅನಂತ ಕೃಪಾ ಆಪಾರ್ಟ್ ಮೆಂಟ್ ನಿವಾಸಿಯಾದ ಲುಕುಮಾನುಲ್ ಹಕೀಂ ಯಾನೆ  ಹಕೀಂ(22ವರ್ಷ) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನು ಮಂಗಳೂರು ನಗರದ ಕಾಲೇಜುವೊಂದರ ಪದವಿ ವಿದ್ಯಾರ್ಥಿಯಾಗಿರುತ್ತಾನೆ ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ

   

Related Articles

error: Content is protected !!