ಮಂಗಳೂರು : ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿಯಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ
ಮೃತಪಟ್ಟವರನ್ನು ರಿಕ್ಷಾ ಚಾಲಕ ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು
ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ಇನ್ನೊಬ್ಬ ಚಾಲಕ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿ ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ