133
ಉಡುಪಿ : ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾ ಅವರ ವಾರಂಟ್ ಆರೋಪಿ ಅಶೋಕ ಎಂಬಾತನನ್ನು ಫೆ.27ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಪತ್ ಅವರು ಸೊಸೈಟಿಯ ನಂದಕಿಶೋರ್ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಯು ನ್ಯಾಯಾಲಯದ ವಿಚಾರಣೆ ವೇಳೆ ಕೈತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

