Home » ಮುಂಗೈ ಇಲ್ಲದ ಕೈದಿ ಜೈಲಿನ ಗೋಡೆ ಹಾರಿದ ….
 

ಮುಂಗೈ ಇಲ್ಲದ ಕೈದಿ ಜೈಲಿನ ಗೋಡೆ ಹಾರಿದ ….

ಸೌಮ್ಯಾ ರೇಪ್, ಕೊಲೆ ಆರೋಪಿ, 4 ಗಂಟೆ ಬಳಿಕ ಸೆರೆ

by Kundapur Xpress
Spread the love

ಕಣ್ಣೂರು : 2011ರಲ್ಲಿ ದೇಶದಲ್ಲಿ ಸುದ್ದಿ ಮಾಡಿದ್ದ ಕೇರಳದ ಸೌಮ್ಯಾ ಅತ್ಯಾಚಾರ, ಕೊಲೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ, ಗೋಡೆ ಹಾರಿ ಪರಾರಿಯಾದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ. ಆದರೆ ಕೆಲವೇ ಗಂಟೆಗಳ ಬಳಿಕ ಆತ ಬಾವಿಯೊಂದರಲ್ಲಿ ಸಿಕ್ಕಿ ಸಿಕ್ಕಿದ್ದಾನೆ

ಜೈಲು ಪರಾರಿ ಪ್ರಕರಣಗಳು ಸಾಮಾನ್ಯವಾದರೂ, ಈತನಿಗೆ ಎಡ ಮುಂಗೈ ಇಲ್ಲದ ಕಾರಣ, ಆತ ಹೇಗೆ ಪರಾರಿ ಆದ ಎಂಬುದು ಮಹತ್ವ ಪಡೆದುಕೊಂಡಿದೆ. ಜತೆಗೆ, ಆತನಿಗೆ ತಪ್ಪಿಸಿಕೊಳ್ಳಲು ಯಾರಾದರೂ ಸಹಾಯ ಮಾಡಿರಬಹುದೇ ಎಂಬ ಶಂಕೆಗೂ ಕಾರಣವಾಗಿದೆ.

ಸಿಸಿ ಟೀವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿಯಲ್ಲಿ ಅಪರಾಧಿ ಗೋವಿಂದಚಾಮಿ ಬಟ್ಟೆಗಳನ್ನು ಒಟ್ಟಾಗಿ ಹೆಣೆದು, ಅದನ್ನು ಹಗ್ಗದಂತೆ ಬಳಸಿಕೊಂಡು ಗೋಡೆ ಹತ್ತಿ, ಬೆಳಗ್ಗೆ 4.15ರಿಂದ 6.30ರ ಅವಧಿಯಲ್ಲಿ ತಪ್ಪಿಸಿಕೊಂಡಿರುವುದು ಪತ್ತೆಯಾಗಿದೆ. ಈ ವಿಷಯವು ಕಣ್ಣೂರು ನಗರ ಪೊಲೀಸರಿಗೆ ಬೆಳಗ್ಗೆ 7.00 ಗಂಟೆಗೆ ತಿಳಿದಿದ್ದು, ಕೂಡಲೇ ಅವನ ಶೋಧಕ್ಕೆ ಇಳಿದಿದ್ದರು. ಅತ್ತ ತಪ್ಪಿಸಿಕೊಂಡ ಕೆಲ ಗಂಟೆಗಳಲ್ಲೇ, ಥಲಪ್ ಎಂಬಲ್ಲಿನ ಪಾಳುಬಿದ್ದ ಬಾವಿಯಲ್ಲಿ ಸಿಕ್ಕಿದ್ದಾನೆ.

 

Related Articles

error: Content is protected !!