ಸಕಲೇಶಪುರ : ಪರೀಕ್ಷೆ ಬರೆಯಲು ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ 3 ಮಕ್ಕಳು ನಾಪತ್ತೆಯಾಗಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶರತ್, ಧನಂಜಯ್, ಮುರುಳಿ ಕಾಣೆಯಾಗಿರುವ ವಿದ್ಯಾರ್ಥಿಗಳು. ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಶಾಲೆಗೆ ಹೋಗುವುದಾಗಿ ಹೇಳಿ ಶಾಲೆಗೆ ಹೋಗಿಲ್ಲ. ಶಿಕ್ಷಕರು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಮಕ್ಕಳಿಗಾಗಿ ಹುಡುಕಾಡಿದ್ದಾರೆ. ಶಾಲೆಯಲ್ಲಿ ಪೂರ್ವ ಸಿದ್ದತಾ ಪರೀಕ್ಷೆ ನಡೆಯುತ್ತಿದ್ದು ಬುಧವಾರ ಇಂಗ್ಲಿಷ್ (preparatory) ಪರೀಕ್ಷೆಯಿತ್ತು. ಅದಕ್ಕೆ ಹೆದರಿ ಮನೆ ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.