Home » ಗವರ್ನರ್ ಹೆಸರಲ್ಲಿ ನಕಲಿ ಖಾತೆ : ಠಾಣೆಗೆ ದೂರು
 

ಗವರ್ನರ್ ಹೆಸರಲ್ಲಿ ನಕಲಿ ಖಾತೆ : ಠಾಣೆಗೆ ದೂರು

by Kundapur Xpress
Spread the love

ಬೆಂಗಳೂರು : ಫೇಸ್‌ಬುಕ್‌ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಂದೇಶ ಕಳುಹಿಸುತ್ತಿದ್ದ ಕಿಡಿಗೇಡಿಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆ‌ರ್.ಪ್ರಭು ಶಂಕರ್‌ ದೂರು ನೀಡಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾರ್ವಜನಿಕರಿಗೆ ಆ ಖಾತೆ ಮೂಲಕ ಸಂದೇಶ ಕಳುಹಿಸುತ್ತಿರುವ ಸಂಗತಿ ರಾಜಭವನದ ಅಧಿಕಾರಿಗಳಿಗೆ ಗೊತ್ತಾಗಿದೆ. ತಕ್ಷಣವೇ ದುಷ್ಕರ್ಮಿಗಳ ವಿರುದ್ಧ ಸಿಇಎನ್ ಠಾಣೆಗೆ ಅವರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

Related Articles

error: Content is protected !!