95
ಬಂಟ್ವಾಳ : ತಾಲೂಕಿನ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ ಅನೇಕ ವಸ್ತುಗಳನ್ನು. ದೋಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ.
ಈ ಮೂಲಕ ಪ್ರಕರಣದ ಬಂಧಿತರ ಸಂಖ್ಯೆ ಎರಡಕ್ಕೇರಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬಳಿಯಿದ್ದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸ್ಂಗ್ ಮೊಬೈಲ್ ಫೋನ್ ವಶಪಡಿಸಿಕೊಂಳ್ಳಲಾಗಿದೆ. ಈ ವೇಳೆ ಆರೋಪಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಜ.3 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಮನೆಗೆ ಇಡಿ ಅಧಿಕಾರಿಗಳ ಹೆಸರಲ್ಲಿ ದಾಳಿ ಮಾಡಿ ದರೋಡೆ ಮಾಡಲಾಗಿತ್ತು
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)