184
ದಾಂಡೇಲಿ : ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ನಕಲಿಯಂತೆ ಕಾಣುವ ನೋಟುಗಳ ಕಂತೆ ಕಂತೆ ಪತ್ತೆಯಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ, ಈ ನೋಟುಗಳು ಹಾಗೂ ಹಣ ಎಣಿಸುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.
ಗಾಂಧಿನಗರದಲ್ಲಿರುವ ನೂರ್‌ಜಾನ್ ಝುಂಜವಾಡಕರ ಎಂಬುವರ ಮನೆಯನ್ನು ಗೋವಾ ಮೂಲದ ಅರ್ಷದ್ ಖಾನ್ ಎಂಬಾತ ಬಾಡಿಗೆಗೆ ಪಡೆದು ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಆಮನೆಯಲ್ಲಿ ಇರಲಿಲ್ಲಎನ್ನಲಾಗಿದೆ. ಆದರೆ, ಮನೆಯ ಹಿಂಬಾಗಿಲ ಚಿಲಕವನ್ನು ಸರಿಯಾಗಿ ಹಾಕಿರಲಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ಬಾಗಿಲು ತೆರೆದು ನೋಡಿದಾಗ ನಕಲಿ ನೋಟುಗಳು ಪತ್ತೆಯಾಗಿವೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

