Home » ವಿದೇಶದಲ್ಲಿ ಉದ್ಯೋಗ ವಂಚನೆ : ಪ್ರಮುಖ ಆರೋಪಿಗಳ ಬಂಧನ
 

ವಿದೇಶದಲ್ಲಿ ಉದ್ಯೋಗ ವಂಚನೆ : ಪ್ರಮುಖ ಆರೋಪಿಗಳ ಬಂಧನ

by Kundapur Xpress
Spread the love

ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸುಮಾರು ನಾಲ್ಕು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಆರೋಪಿಗಳನ್ನು ಮುಂಬೈಯಲ್ಲಿ ಬಂಧಿಸಲಾಗಿದ್ದು, ವಿಚಾರಣೆ ಕೈಗೆತ್ತಿಕೊಳ್ಳ ಲಾಗಿದೆ. ಬಂಧಿತ ಆರೋಪಿಗಳು ಮಂಗಳೂರಿನ ಸುಮಾರು 300 ಮಂದಿ ಅಮಾಯಕರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಅವರಿಂದ ಲಕ್ಷಾಂತರ ಹಣ ಪಡೆದು ವಂಚಿಸಿದ್ದರು.

ಪ್ರಕರಣ ಬೆನ್ನುಹತ್ತಿದ ಪೊಲೀಸರ ತಂಡ ಆರೋಪಿಗಳನ್ನು ಮುಂಬೈಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ಮಂಗಳೂರಿನ ಉತ್ತರ ಪೊಲೀಸ್ ಠಾಣೆ ಮತ್ತು ಮುಂಬೈಯ ನವೀ ಮುಂಬೈಠಾಣೆಯಲ್ಲಿ ವಂಚನೆ ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಟ್ ಆ್ಯಕ್ಷನಡಿ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ. ಈ ಪ್ರಕರಣದಡಿ ಕೇಸು ದಾಖಲಿಸಿದರೆ ಬೇಲ್ ಸಿಗುವುದು ಅಷ್ಟು ಸುಲಭವಲ್ಲ ಎಂದು ಪೊಲೀಸ್ ಕಮಿಷನ‌ರ್ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

 

Related Articles

error: Content is protected !!