Home » ಬಸ್‌ ಮೇಲೆ ವಿದೇಶಿ ಭಯೋತ್ಪಾದಕ ದಾಳಿ
 

ಬಸ್‌ ಮೇಲೆ ವಿದೇಶಿ ಭಯೋತ್ಪಾದಕ ದಾಳಿ

by Kundapur Xpress
Spread the love

ಜಮ್ಮು: ವೈಷ್ಟೋದೇವಿ ದೇಗುಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಾನುವಾರ ನಡೆದ ಉಗ್ರ ದಾಳಿಯಲ್ಲಿ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ವ್ಯಕ್ತವಾಗಿದೆ. 9 ಜನರನ್ನು ಬಲಿ ಪಡೆದ ದಾಳಿಯಲ್ಲಿ ಮೂವರು ವಿದೇಶಿ ಉಗ್ರರು ಭಾಗಿಯಾಗಿರುವ ಮತ್ತು ದಾಳಿಗೆ ಅಮೆರಿಕ ನಿರ್ಮಿತ ಎಂ-4 ರೈಫಲ್ ಬಳಸಿರುವುದು ಪ್ರಾಥಮಿಕ ತನಿಖೆ ವೇಳೆ ಖಚಿತಪಟ್ಟಿದೆ.ಈ ನಡುವೆ ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಎಂಬ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಯಾತ್ರಾ ರ್ಥಿಗಳಿದ್ದ ಬಸ್ ಮೇಲೆ  ದಾಳಿ ಮಾಡಿದ್ದು ನಾವೇ. ಇದು ಕೇವಲ ಆರಂಭವಷ್ಟೇ. ಇನ್ನು ಮುಂದೆಯೂ ಸಹ ಸ್ಥಳೀಯರು ಮತ್ತು ಪ್ರವಾಸಿಗರ ಮೇಲೆ ಮತ್ತಷ್ಟು ಭಯಾನಕ ದಾಳಿಗಳು ನಡೆಯಲಿವೆ ಎಂದು ಎಚ್ಚರಿಸಿದೆ.

   

Related Articles

error: Content is protected !!