Home » ಚಿನ್ನ ಕಳ್ಳಸಾಗಾಣಿಕೆ : ಹಲವು ನಟಿಯರು ಭಾಗಿ…?
 

ಚಿನ್ನ ಕಳ್ಳಸಾಗಾಣಿಕೆ : ಹಲವು ನಟಿಯರು ಭಾಗಿ…?

ತನಿಖೆಯಲ್ಲಿ ಸ್ಪೋಟಕ ಅಂಶ ಬೆಳಕಿಗೆ

by Kundapur Xpress
Spread the love

ಬೆಂಗಳೂರು : ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕಳೆದ ಐದು ವರ್ಷಗಳಿಂದ ಕನ್ನಡ ಚಲನಚಿತ್ರ, ಕಿರುತೆರೆಯ ಕೆಲವು ನಟಿಯರನ್ನು ಬಳಸಿಕೊಂಡು ವಿದೇಶದಿಂದ ಕಳ್ಳ ಹಾದಿಯಲ್ಲಿ ಚಿನ್ನ ಸಾಗಿಸುವ ಜಾಲವೊಂದು ಸಕ್ರಿಯವಾಗಿರುವ ವಿಚಾರ ಕಂದಾಯ ಗುಪ್ತಚರ ನಿರ್ದೇಶ ನಾಲಯದ (ಡಿಆರ್‌ಐ) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಕೆಲ ವರ್ಷಗಳಿಂದ ನಿರಂತರವಾಗಿ ‘ದುಬೈ ಪ್ರವಾಸಕ್ಕೆ ಹೋಗಿದ್ದ ನಟಿಯರ ಪಟ್ಟಿಯನ್ನು ತಯಾರಿಸಿದ್ದು, ಆ ನಟಿಯರ ಆರ್ಥಿಕ ವ್ಯವಹಾರದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ ಹೀಗಾಗಿ ರನ್ಯಾ ರಾವ್ ಬಳಿಕ ಮತ್ತಷ್ಟು ನಟಿಯರಿಗೆ ತನಿಖೆ ಬಿಸಿ ತಟ್ಟಲಿದೆ ಎನ್ನಲಾಗಿದೆ. ತಮ್ಮ ಜಾಲಕ್ಕೆ ಖ್ಯಾತನಾಮರ ಬದಲು ಎರಡನೇ ಹಂತದ ನಟಿಯರನ್ನೇ ಚಿನ್ನ ಕಳ್ಳ ಸಾಗಣೆದಾರರು ಗುರಿಯಾಗಿಸಿ ಬಳಸಿದ್ದಾರೆ. 

ಈ ನಟಿಯರಿಗೆ ಹಣದಾಸೆ ಅಥವಾ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ಅವಕಾಶ ಕೊಡಿಸುವ ಆಮಿಷವೊಡ್ಡಿ ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಕೊರಿಯರ್ ರೀತಿ ಬಳಸಿಕೊಂಡಿರುವ ಸಾಧ್ಯತೆಗಳಿವೆ ಎಂಬ ಶಂಕೆ ವ್ಯಕ್ತವಾಗಿದೆ. ನಟಿ ರನ್ಯಾ ರಾವ್ ಮಾದರಿಯಲ್ಲೇ ಕಳೆದ ವರ್ಷ ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಾಫ್ಟ್‌ವೇರ್‌ಕಂಪನಿ ಉದ್ಯೋಗಿಯ ಪತ್ನಿ ಚಿನ್ನ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ಬ್ಲ್ಯಾಕ್‌ಮೇಲ್ ಮಾಡಿ ಟೆಕ್ಕಿ ಪತ್ನಿಯನ್ನು ಕೃತ್ಯಕ್ಕೆ ಬಳಸಿಕೊಳ್ಳಲಾಗಿತ್ತು.

ಆದರೆ ರಾಜ್ಯದಲ್ಲಿ ನಟಿಯರಿಗೆ ಒಂದು ಬಾರಿಗೆ ಇಂತಿಷ್ಟು ಮೊತ್ತ ಕೊಡುವುದಾಗಿ ಹೇಳಿ ಚಿನ್ನ ಸಾಗಣೆಗೆ ಉಪಯೋಗಿಸಿರ ಬಹುದು. ಈ ನೆಟ್ವರ್ಕ್ನಲ್ಲಿ ಕಿರುತೆರೆ ನಟಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

 

Related Articles

error: Content is protected !!