Home » ಹಿಟ್‌ & ರನ್‌ ಪ್ರಕರಣ
 

ಹಿಟ್‌ & ರನ್‌ ಪ್ರಕರಣ

by Kundapur Xpress
Spread the love

ಬೆಂಗಳೂರು: ಇತ್ತೀಚೆಗೆ ನಗರದ ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್‌ & ರನ್‌ ಪ್ರಕರಣದ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಟಿಪ್ಪರ್ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಿದ್ದಾರೆ.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಧನುಶ್ರೀ (21) ರಸ್ತೆಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಟಿಪ್ಪರ್‌ ಹರಿದಿತ್ತು. ಇದರಿಂದ ಯುವತಿ ಸಾವನ್ನಪ್ಪಿದ್ದಳು. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿತ್ತು.

 

Related Articles

error: Content is protected !!