ಉಡುಪಿ : ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ದಂಪತಿಯನ್ನು ಉಡುಪಿ ಸೆನ್ ಪೊಲೀಸರು ಉಡುಪಿ ಪಿಪಿಸಿ ಕಾಲೇಜು ಸಮೀಪದ ಮನೆಯಿಂದ ಬಂಧಿಸಿದ್ದಾರೆ. ಅನಂತ ಪಿ. ಹಾಗೂ ಆತನ ಪತ್ನಿ ವಾಣಿಶ್ರೀ ಬಂಧಿತರು. ಇವರಿಂದ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಡಿಗೆ ಮನೆಯೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ವೆಬ್ ಸೈಟ್ ಮೂಲಕ ಐಪಿಎಲ್ ಕ್ರಿಕೆಟ್‌ನ ಫೈನಲ್ ಪಂದ್ಯಾಟಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದರು.
ಈ ಬಗ್ಗೆ ದೊರೆತ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅನಂತ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಿದ್ದು ವಾಟ್ಸಾಪ್ ಚಾಟ್ ಮೂಲಕ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಣವನ್ನು ನೀಡುವ ಒಪ್ಪಿಗೆಯ ಮೇರೆಗೆ ಪಂಥವನ್ನು ಸ್ವೀಕರಿಸಿದ್ದರು
ಅದನ್ನು ಸಿದ್ದಾರ್ಥ ಎಂಟರ್ ಪೈಸಸ್ ಎಂಬ ಸ್ಥಂಸ್ಥೆಯ ಬ್ಯಾಂಕ್ ಖಾತೆ ಹಾಗೂ ಫೋನ್ ಪೇ ಮೂಲಕ ಹಣವನ್ನು ಪಣವಾಗಿಟ್ಟುಕೊಂಡಿದ್ದು ಕ್ರಿಕೆಟ್ ಬೆಟ್ಟಿಂಗ್ ವ್ಯವಹಾರವನ್ನು ತನ್ನ ಮತ್ತು ಪತ್ನಿಯ ಬ್ಯಾಂಕ್ ಖಾತೆ ಬಳಕೆ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

