ಮಧುಗಿರಿ : ದೂರು ನೀಡಲು ಬಂದ ಮಹಿಳೆಯ ಮೇಲೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಂತ್ರಸ್ತೆಯ ದೂರಿನ ಮೇರೆಗೆ ಬಂಧನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಜ.2 ರ ಸಂಜೆ ದೂರು ನೀಡಲು ಬಂದ ಪಾವಗಡದ ಮಹಿಳೆ ಮೇಲೆ ಡಿವೈಎಸ್ಪಿ ಕಚೇರಿಯ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿ ಬಂದಿದ್ದರಿಂದ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು