184
ಕುಂದಾಪುರ : ಕುಂದಾಪುರದ ಚರ್ಚ ರಸ್ತೆಯ ಬಳಿಯಿರುವ ಪಂಚಗಂಗಾವಳಿ ಹೊಳೆಯಲ್ಲಿ ಮರಳನ್ನು ತೆಗೆದು ಎರಡು ವಾಹನಗಳಲ್ಲಿ ತುಂಬಿಸುತ್ತಿರುವುದಾಗಿ ಮಾಹಿತಿ ಬಂದ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾನಾಯ್ಕ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.
ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಸುನೀಲ್ ಎಂಬಾನ ಜೊತೆ ಸೇರಿ ಮರಳನ್ನು ತೆಗೆದು ಗೊಣಿ ಚೀಲಗಳಿಗೆ ತುಂಬಿಸಿ ಸಾಗಾಟ ಮಾಡಲು ತುಂಬಿಸುತ್ತಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

