Home » ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ
 

ಮೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

by Kundapur Xpress
Spread the love

ಬ್ರಹ್ಮಾವರ :ಇಲ್ಲಿನ ಮೆಸ್ಕಾಂ ಸಹಾಯಕ ಇಂಜಿನಿಯರ್ ತಮ್ಮ ಕಚೇರಿಯಲ್ಲಿ ರೂ. 20 ಸಾವಿರ ಲಂಚದ ಹಣ ಪಡೆಯುತ್ತಿದ್ದಾಗಲೇ ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಆರೋಪಿಯನ್ನು ಅಶೋಕ್ ಪೂಜಾರಿ (46) ಎಂದು ಗುರುತಿಸಲಾಗಿದೆ.

ಸಾರ್ವಜನಿಕರೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕಳೆದ ಎರಡು ತಿಂಗಳಿನಿಂದ ಸತಾಯಿಸುತ್ತಿದ್ದರು. ನಂತರ ರೂ. 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಲಂಚ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರರವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಮಂಜುನಾಥ್, ಉಡುಪಿ ಪಿಐಗಳಾದ ರಾಜೇಂದ್ರ ನಾಯ್ಕ, ಭಾರತಿ  ಭಾಗಿಯಾಗಿದ್ದರು.

 

Related Articles

error: Content is protected !!