582
ಉಡುಪಿ :ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ವಸತಿ ಸಮುಚ್ಚಯ ಒಂದರಲ್ಲಿ ವೇಶ್ಯಾವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ಮಣಿಪಾಲ ಪೊಲೀಸರು ರಕ್ಷಿಸಿದ್ದಾರೆ
ಖಚಿತ ಮಾಹಿತಿಯ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ. ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಗಣೇಶ್, ಸುಧೀರ್ ಮತ್ತು ಮಾರುತಿ ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡು ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.
ಪ್ರಕರಣದ ಆರೋಪಿಗಳು ಜಗದೀಶ ಯಾನೆ ಜಗ್ಗ ಎಂಬಾತನ ಜೊತೆ ಸೇರಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿದ್ದರು ಎನ್ನಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

