Home » ನಿಷೇಧಿತ ಮಾದಕ ವಸ್ತು ವಶ : ಇಬ್ಬರ ಬಂಧನ
 

ನಿಷೇಧಿತ ಮಾದಕ ವಸ್ತು ವಶ : ಇಬ್ಬರ ಬಂಧನ

by Kundapur Xpress
Spread the love

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂ ಡಿ ಎಂ ಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ ಮಂಜೇಶ್ವರ ಹೊಸಬೆಟ್ಟು ನಿವಾಸಿ ಮುಸ್ತಾಫ (37 ವರ್ಷ) ಹಾಗೂ ಕುಂಜತ್ತೂರಿನ ಶಂಶುದ್ದೀನ್ (38 ವರ್ಷ) ಬಂಧಿತರು ಇವರಿಂದ 95 ಸಾವಿರ ಮೌಲ್ಯದ ಸತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

ಉಳ್ಳಾಲದ ತಲಪಾಡಿಯ ಕೆ ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದಾರೆ ಆರೋಪಿಗಳಿಂದ 75,000 ಮೌಲ್ಯದ 15 ಗ್ರಾಂ ಎಂಡಿಎಂಎ ಮಾದಕ ವಸ್ತು ಎರಡು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಶ್ರೀ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ  ಎಸಿಪಿ ಶ್ರೀ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ  ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು

   

Related Articles

error: Content is protected !!