320
ಉಡುಪಿ: ನಗರದ ಅಂಬಲಪಾಡಿ ಗ್ರಾಮದಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಅನುಮತಿ ಪಡೆಯದೆ ಡಿಜೆ ಸೌಂಡ್ಸ್ ಹಾಕಲಾಗಿದೆ ಎಂದು ನಗರ ಠಾಣಾ ಪೊಲೀಸರು ಮನೆಗೆ ದಾಳಿ ನಡೆಸಿ, ಧ್ವನಿವರ್ಧಕಗಳನ್ನು ವಶ ಪಡಿಸಿಕೊಂಡಿದ್ದಾರೆ. ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ಸ್ ಹಾಕಿದ್ದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ ಎಂದು ದೂರು ಬಂದ ಹಿನ್ನಲೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

