ಬ್ರಹ್ಮಾವರ : ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದ್ದು ಅವರನ್ನು ಬಂಧಿಸಲಾಗಿದೆ
ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದಾಗ ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ ಈ ಬಗ್ಗೆ ಉಡುಪಿ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕಿ ಮಧುರಾ.ಎನ್.ದಾಸ್ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ