Home » ಅಪ್ರಾಪ್ತ ಬಾಲಕಿಯ ಅತ್ಯಾಚಾರ : ಆರೋಪಿಗಳ ಬಂಧನ
 

ಅಪ್ರಾಪ್ತ ಬಾಲಕಿಯ ಅತ್ಯಾಚಾರ : ಆರೋಪಿಗಳ ಬಂಧನ

by Kundapur Xpress
Spread the love

ಮೂಲ್ಕಿ : ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರದೊಯ್ದು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಕಿನ್ನಗೋಳಿಯಲ್ಲಿ ನಡೆದಿದೆ. ಈ ಬಗ್ಗೆ ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಇತರೆ ಮೂವರ ವಿರುದ್ದ ಬಾಲಕಿಯ ತಾಯಿ ದೂರು ನೀಡಿದ್ದು ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮುಲ್ಕಿ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದಿನದ ಹಿಂದೆ ಬಾಲಕಿ ಏಕಾಏಕಿ ನಾಪತ್ತೆಯಾಗಿದ್ದು ತಾಯಿ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹುಟ್ಟು ಹಬ್ಬದ ನೆಪದಲ್ಲಿ ಆರೋಪಿ ಅಪ್ರಾಪ್ತ ಬಾಲಕ ಸಹಿತ ಇತರ ಮೂವರ ಬೆಂಬಲದೊಂದಿಗೆ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಕಿನ್ನಿಗೋಳಿ ಪರಿಸರದಲ್ಲಿ ನಡೆದ ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಅಪ್ರಾಪ್ತ ಬಾಲಕರ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

 

Related Articles

error: Content is protected !!