ಮೈಸೂರು : ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುವುದಕ್ಕೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮೌಲ್ಕಿ ಮುಫ್ತಿ ಮುಸ್ತಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅವಹೇಳನಕಾರಿ ಚಿತ್ರವೊಂದನ್ನು ಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಕೆಲವು ಮುಸ್ಲಿಂ ಪುಂಡರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದ ವೇಳೆ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಪ್ರಚೋದನಾಕಾರಿ ಭಾಷಣ ಮಾಡಿದ್ದ ಇದರಿಂದಾಗಿ ಸ್ಥಳದಲ್ಲಿದ್ದ ಪುಂಡರ ಗುಂಪು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು
ಪೊಲೀಸ್ ಠಾಣೆ ಮೇಲೆ ಕಲ್ಲುಗಳಿಂದ ದಾಳಿ ನಡೆಸಿದ್ದರು. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡು, 14ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸಿ ಕೋರ್ಟಿಗೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ

